Clubhouse logo

ನಿರಂಕುಶಮತಿ

@bharathkukka

559

friends

Cyber ​​Security ಓ ನನ್ನ ಚೇತನ, ಆಗು ನೀ ಅನಿಕೇತನ! ರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ, ಆಗು ನೀ ಅನಿಕೇತನ! ನೂರು ಮತದ ಹೊಟ್ಟ ತೂರಿ, ಎಲ್ಲ ತತ್ತ್ವದೆಲ್ಲೆ ಮೀರಿ, ನಿರ್ದಿಗಂತವಾಗಿ ಏರಿ, ಓ ನನ್ನ ಚೇತನ, ಆಗು ನೀ ಅನಿಕೇತನ! ಎಲ್ಲಿಯೂ ನಿಲ್ಲದಿರು; ಮನೆಯನೆಂದೂ ಕಟ್ಟದಿರು; ಕೊನೆಯನೆಂದೂ ಮುಟ್ಟದಿರು; ಓ ಅನಂತವಾಗಿರು! ಓ ನನ್ನ ಚೇತನ, ಆಗು ನೀ ಅನಿಕೇತನ! ಅನಂತ ತಾನ್ ಅನಂತವಾಗಿ ಆಗುತಿಹನೆ ನಿತ್ಯಯೋಗಿ; ಅನಂತ ನೀ ಅನಂತವಾಗು; ಆಗು, ಆಗು, ಆಗು, ಆಗು, ಓ ನನ್ನ ಚೇತನ, ಆಗು ನೀ ಅನಿಕೇತನ! -ಕುವೆಂಪು ಗುಡಿ ಚರ್ಚು ಮಸಜೀದಿಗಳ ಬಿಟ್ಟು ಹೊರಬನ್ನಿ ಬಡತನವ ಬುಡಮಟ್ಟ ಕೀಳಬನ್ನಿ ಮೌಢ್ಯತೆಯ ಮಾರಿಯನು ಹೊರದೂಡಲೈತನ್ನಿ ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ ಓ, ಬನ್ನಿ, ಸೋದರರೆ, ಬೇಗ ಬನ್ನಿ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ; ಮತಿಯಿಂದ ದುಡಿಯಿರೈ ಲೋಕಹಿತಕೆ. ಆ ಮತದ ಈ ಮತದ ಹಳೆಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ. ಓ, ಬನ್ನಿ ಸೋದರರೆ ವಿಶ್ವಪಥಕೆ -ಕುವೆಂಪು ಯಾವ  ಕಾಲದ  ಶಾಸ್ತ್ರವೇನು ಹೇಳಿದರೇನು ? ಎದೆಯ  ದನಿಗೂ  ಮಿಗಿಲು  ಶಾಸ್ತ್ರವಿಹುದೇನು ? -ಕುವೆಂಪು ಮನುಷ್ಯ ಜಾತಿ ತಾನೊಂದೆ ವಲಂ ‌‌‌‌‌ -ಪಂಪ (ವಿಕ್ರಮಾರ್ಜುನ ವಿಜಯ) ಅರಿವಂ ಪೊಸಯಿಸುವುದು ಧರ್ಮಂ ‌‌‌ -ಪಂಪ (ಆದಿ ಪುರಾಣ) ಏನಾದರೂ ಆಗು ಮೊದಲು ಮಾನವನಾಗು -ಸಿದ್ದಯ್ಯ ಪುರಾಣಿಕ "ಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದೆಯಾ ಈ ಪ್ರಪಂಚದಲ್ಲಿ?" -ಕೆ ಪಿ ಪೂರ್ಣಚಂದ್ರ ತೇಜಸ್ವಿ